ಸುದ್ದಿವಾಹಿನಿಯ ಚರ್ಚೆಯ ನೇರಪ್ರಸಾರದಲ್ಲೇ ಹೊಡೆದಾಡಿಕೊಂಡ ರಾಜಕಾರಣಿಗಳು…

119
firstsuddi

ಇಸ್ಲಾಮಾಬಾದ್: ಪಾಕಿಸ್ತಾನದ ಸುದ್ದಿ ವಾಹಿನಿಯೊಂದರ ಸಂವಾದ ಕಾರ್ಯಕ್ರಮದಲ್ಲಿ ಇಬ್ಬರು ರಾಜಕಾರಣಿಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ವರದಿಯಾಗಿದೆ.

`ಕಲ್ ತಕ್’ ಎಂಬ ಶೋನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.

ಇಮ್ರಾನ್ ಖಾನ್ ಅವರ ವಕೀಲ ಶೇರ್ ಅಫ್ಜಲ್ ಮರ್ವಾತ್ ಮತ್ತು ನವಾಜ್ ಷರೀಫ್ ಅವರ ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್‍ನ ಸೆನೆಟರ್ ಆಗಿರುವ ಅಫ್ನಾನ್ ಉಲ್ಲಾ ನಡುವೆ ವಾಗ್ವಾದ ನಡೆಯಿತು. ಸೆನೆಟರ್ ಅಫ್ನಾನ್ ಅವರು ಇಮ್ರಾನ್ ಖಾನ್ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅದು ಇಬ್ಬರ ನಡುವಿನ ಹೊಡೆದಾಟಕ್ಕೆ ಕಾರಣವಾಗಿದೆ.

ಈ ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಹಿಂಸಾಚಾರವನ್ನು ತಡೆಯಲು ವಿಫಲವಾದ `ಕಲ್ ತಕ್’ನ ಹೋಸ್ಟ್ ಸಿಬ್ಬಂದಿಯ ಕ್ರಮವನ್ನು ಹಲವರು ಖಂಡಿಸಿದ್ದಾರೆ.