ಸುಪ್ರೀಂ ಕೋರ್ಟ್‍ನ 48ನೇ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ…

129
firstsuddi

ನವದೆಹಲಿ : ಸುಪ್ರೀಂ ಕೋರ್ಟ್‍ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್. ವಿ. ರಮಣ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎನ್.ವಿ.ರಮಣ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು.

ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ಅವರ ಅಧಿಕಾರದ ಅವಧಿ ನಿನ್ನೆಗೆ ಮುಕ್ತಾಯವಾಗಿದೆ. ಹೀಗಾಗಿ ಮುಖ್ಯ ನ್ಯಾಯಮೂರ್ತಿಯಾಗಿ ರಮಣ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಎನ್.ವಿ.ರಮಣ ಅವರ ಅಧಿಕಾರವಧಿ 2022, ಆಗಸ್ಟ್ 26ರವರೆಗೂ ಇದೆ.

1957, ಆಗಸ್ಟ್ 27ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂನಲ್ಲಿ ಜನಿಸಿದ ಎನ್.ವಿ.ರಮಣ ಅವರು 2000ರ ಜೂನ್ ನಲ್ಲಿ ಆಂಧ್ರ ಪ್ರದೇಶದ ಹೈಕೋರ್ಟ್ ಗೆ ಖಾಯಂ ನ್ಯಾಯಾಧೀಶರಾಗಿ ನೇಮಕವಾಗಿದ್ದರು. 2014 ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾಗುವುಕ್ಕೂ ಮುನ್ನ ದೆಹಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ.