ಸುಪ್ರೀಂ ಕೋರ್ಟ್‍ನ ಮುಂದಿನ ಮುಖ್ಯ ನ್ಯಾಯಧೀಶರಾಗಿ ಶರಾದ್ ಅರವಿಂದ್ ಬೊಬ್ಡೆ ಅವರು ಆಯ್ಕೆ…

201
firstsuddi

ನವದೆಹಲಿ : ಸುಪ್ರೀಂ ಕೋರ್ಟ್‍ನ ಮುಂದಿನ ಮುಖ್ಯ ನ್ಯಾಯಧೀಶರಾಗಿ ಶರಾದ್ ಅರವಿಂದ್ ಬೊಬ್ಡೆ ಅವರು ಆಯ್ಕೆಯಾಗಿದ್ದಾರೆ. ಪ್ರಸ್ತುತ ನ್ಯಾಯಾಮೂರ್ತಿ ರಂಜನ್ ಗೊಗೋಯ್ ಅವರು ನವೆಂಬರ್ 17ರಂದು ನಿವೃತ್ತಿ ಹೊಂದಲಿದ್ದು, ನವೆಂಬರ್ 18ರಂದು ಅರವಿಂದ್ ಬೊಬ್ಡೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅರವಿಂದ್ ಬೊಬ್ಡೆ ಅವರನ್ನು ಮುಂದಿನ ನ್ಯಾಯಮೂರ್ತಿಯಾಗಿ ಆಯ್ಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಅದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬೊಬ್ಡೆ ಅವರನ್ನು ನೇಮಕ ಮಾಡಿದ್ದಾರೆ. ನ್ಯಾಯಧೀಶ ಬೊಬ್ಡೆ ಅವರು ಮಧ್ಯಪ್ರದೇಶದ ಹೈಕೋರ್ಟ್‍ನಲ್ಲಿ ಮುಖ್ಯ ನ್ಯಾಯಧೀಶರಾಗಿ ಕಾರ್ಯ ನಿರ್ವಹಿಸಿದ್ದು, 23 ಏಪ್ರಿಲ್ 2021 ರಂದು ನಿವೃತ್ತರಾಗಲಿದ್ದಾರೆ.