ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪದಲ್ಲಿ ಚುನಾವಣಾ ಪ್ರಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸೋಲಿಸಲು ಚಕ್ರವ್ಯೂಹವನ್ನು ಹೆಣೆಯಲಾಗಿದ್ದು, ಸುಮಲತಾ ಅಂಬರೀಶ್ ಅವರು ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ ಅವರಿಗೆ ಕಾಂಗ್ರೆಸ್, ಬಿಜೆಪಿ ಹಾಗೂ ರೈತಸಂಘದವರ ಬೆಂಬಲವೂ ಇದೆ. ಇವೆಲ್ಲವನ್ನು ಮೆಟ್ಟಿ ನಿಲ್ಲಲು ಮಂಡ್ಯ ಜಿಲ್ಲೆಯ ಜನರು ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಮೇ 23 ರ ನಂತರ ಎಲ್ಲರಿಗೂ ಉತ್ತರ ಕೊಡುತ್ತೇನೆ ಎಂದು ಖಾರವಾಗಿ ಪ್ರತಿಕ್ರಯಿಸಿದ್ದಾರೆ.










