ಮೈಸೂರು : ಸಂಸದೆ ಸುಮಲತಾ ಅಂಬರೀಶ್ ನಾಳೆ ಬಿಜೆಪಿ ಬಿಜೆಪಿ ಸೇರುತ್ತಾರೆ ಎಂದು ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮೋದಿ ಕಾರ್ಯಕ್ರಮದಲ್ಲೇ ಪಕ್ಷ ಸೇರ್ಪಡೆಗೆ ಪ್ಲ್ಯಾನ್ ಮಾಡಿದ್ದರು. ಆದ್ರೆ, ಸರ್ಕಾರಿ ಕಾರ್ಯಕ್ರಮ ಆಗಿದ್ದರಿಂದ ಅವಕಾಶ ಸಿಗಲಿಲ್ಲ. ಹೀಗಾಗಿ ನನ್ನ ಪ್ರಕಾರ ಅವರು ನಾಳೆ ಬಿಜೆಪಿ ಸೇರಬಹುದು ಎಂದು ಹೇಳಿದರು.
ಮತ್ತೊಂದೆಡೆ ನಾಳೆಯೇ ಸುಮಲತಾ ಅಂಬರೀಶ್ ಸುದ್ದಿಗೋಷ್ಠಿ ಕರೆದಿದ್ದು, ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಿಸುವ ಸಾಧ್ಯತೆಗಳಿವೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ನೀಡಿದ್ದರಿಂದ ಸುಮಲತಾ ಅಂಬರೀಶ್ ತಮ್ಮ ನಿರ್ಧಾರ ಪ್ರಕಟಿಸಲು ಸುದ್ದಿಗೋಷ್ಠಿ ಕರೆದಿದ್ದಾರೆ ಎಂದು ತಿಳಿದುಬಂದಿದೆ.










