ಸುಳ್ಯದಲ್ಲಿ ಗುಂಡಿನ ದಾಳಿ ; ಅಪಾಯದಿಂದ ಪಾರಾದ ವ್ಯಕ್ತಿ…

78
firstsuddi

ದಕ್ಷಿಣ ಕನ್ನಡ : ನಿನ್ನೆ ರಾತ್ರಿ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ ಜಯನಗರದ ನಿವಾಸಿ ಮೊಹಮ್ಮದ್ ಸಾಯಿ (39) ಎಂಬವರು ಸುಳ್ಯದ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಹತ್ತಿರವಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ತನ್ನ ಕಾರನ್ನು ನಿಲ್ಲಿಸಿ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಮೊಹಮ್ಮದ್ ಕಾರು ಹತ್ತುತ್ತಿದ್ದ ವೇಳೆ ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಹಮ್ಮದ್ ಸಾಯಿಯವರ ಕಡೆಗೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಅದೃಷ್ಟವಶಾತ್ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದೆ. ಗುಂಡಿನ ಚಿಲ್ಡ್ ಹಾರಿದ ಪರಿಣಾಮ ಮೊಹಮ್ಮದ್ ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಆರಂಭಿಸಿದ್ದಾರೆ.