ಬೆಳಗಾವಿ : ಸುವರ್ಣಸೌಧದ ವಿಧಾನಸಭೆ ಸಭಾಂಗಣದ ಒಳಗಡೆ ಸಾವರ್ಕರ್ ಸೇರಿ 7 ಮಂದಿಯ ಫೋಟೋವನ್ನು ಅನಾವರಣ ಮಾಡಲಾಗಿದೆ.
ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಲಾಲ್ ಬಹಾದ್ದೂರ್ ಶಾಸ್ತ್ರೀ, ಸರ್ದಾರ್ ವಲ್ಲಭಭಾಯ್ ಪಟೇಲ್, ಬಸವಣ್ಣ, ಸ್ವಾಮಿ ವಿವೇಕಾನಂದ, ವಿ ಡಿ ಸಾವರ್ಕರ್ ಫೋಟೋವನ್ನು ಅನಾವರಣಗೊಳಿಸಲಾಗಿದೆ. ಅವುಗಳಲ್ಲಿ ಸಾವರ್ಕರ್ ಫೋಟೋ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬೆಳಗಾವಿ ಅಧಿವೇಶನದ ಮೊದಲ ದಿನವೇ ಸಾವರ್ಕರ್ ಫೋಟೋ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಸುವರ್ಣಸೌಧದ ವಿಐಪಿ ಗೇಟ್ ಬಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಕಾಗೇರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಯು.ಟಿ.ಖಾದರ್, ಹಿರಿಯ ಕಾಂಗ್ರೆಸ್ ನಾಯಕ ಹೆಚ್.ಕೆ.ಪಾಟೀಲ್ ಸೇರಿದಂತೆ ಕೈ ಮುಖಂಡರು ಭಾಗಿಯಾಗಿದ್ದರು.










