ಸೆ.17 ರವರೆಗೆ ಡಿಕೆಶಿಗೆ ಇಡಿ ಕಸ್ಟಡಿ…

277
firstsuddi

ನವದೆಹಲಿ : ಅಕ್ರಮ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಶದಲ್ಲಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೋರ್ಟ್ ಇನ್ನೂ 4ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. ಇಂದು ಡಿ.ಕೆ. ಶಿವಕುಮಾರ್ ಅವರ ಇಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ, ಇಂದು ಮಧ್ಯಾಹ್ನ ಇಡಿ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಡಿಕೆಶಿ ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಜಾಮೀನು ನೀಡಬೇಕು ಎಂದು ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದು, ಇಡಿ ಪರ ವಕೀಲರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರು ವಿಚಾರಣೆ ಪೂರ್ಣಗೊಂಡಿಲ್ಲ ಇನ್ನೂ 5ದಿನ ಕಸ್ಟಡಿಗೆ ನೀಡಿ ಎಂದು ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್ ಡಿಕೆಶಿ ಅವರನ್ನು ಸೆ.17ರವರೆಗೆ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತು.