ಮಡಿಕೇರಿ: ಇಲ್ಲಿನ ಹಾರಂಗಿ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ವ್ಯಕ್ತಿಯೊಬ್ಬ ಆಯತಪ್ಪಿ ನದಿಗೆ ಬಿದ್ದು ನೀರುಪಾಲಾಗಿರುವ ಘಟನೆ ನಿನ್ನೆ ನಡೆದಿದೆ.
ಬೆಂಗಳೂರಿನ ಉದ್ಯಮಿ ಸಂದೀಪ್ (40) ಮೃತ ದುರ್ದೈವಿ. ಬೆಂಗಳೂರಿನಿಂದ ಜಿಲ್ಲೆಗೆ ಆಗಮಿಸಿದ ನಾಲ್ವರು ಪ್ರವಾಸಿಗರು ಗೋಣಿಕೊಪ್ಪ, ಮಡಿಕೇರಿ ನಂತರ ನಿನ್ನೆ ಸಂಜೆ ಹಾರಂಗಿ ಅಣೆಕಟ್ಟೆಗೆ ಭೇಟಿ ನೀಡಿದರು. ಅಣೆಕಟ್ಟೆಯ ಎದುರುಗಡೆ ಇರುವ ಸೇತುವೆಯಲ್ಲಿ ಸೆಲ್ಫಿ ತೆಗೆಯುವ ಸಂದರ್ಭ ಸಂದೀಪ್ ನದಿಗೆ ಬಿದ್ದಿರುವುದಾಗಿ ಅವರ ಸ್ನೇಹಿತರು ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಂದೀಪ್‌ಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದು, ಜಲಾಶಯದಿಂದ ನೀರು ಹೊರಬಿಡುವುದನ್ನು ನಿಲ್ಲಿಸಿದ್ದಾರೆ. ಘಟನೆ ನಡೆದಾಗ ಪ್ರವಾಸಿಗರು ಕುಡಿದ ಅಮಲಿನಲ್ಲಿದ್ದ ಶಂಕೆ ವ್ಯಕ್ತವಾಗಿದೆ.










