ಸೇನಾ ಹೆಲಿಕಾಪ್ಟರ್ ಪತನ – 14 ಪ್ರಯಾಣಿಕರ ಪೈಕಿ 13 ಮಂದಿ ಸಾವು…

72
firstsuddi

ನವದೆಹಲಿ : ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿದ್ದ 14 ಜನರಲ್ಲಿ 13 ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನೂ ಮೃತಪಟ್ಟವರ ಗುರುತು ಪತ್ತೆಗಾಗಿ ಡಿಎನ್ಎ ಪರೀಕ್ಷೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಸೇನಾ ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ತೆರಳುತ್ತಿತ್ತು. ಈ ವೇಳೆ ನೀಲಗಿರಿ ಅರಣ್ಯ ಪ್ರದೇಶದ ಕೂನೂರು ಬಳಿ ಅಪಘಾತಕ್ಕೀಡಾಗಿದೆ.