ಸೈನಿಕರ ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ : ಸಿಎಂ ಬೊಮ್ಮಾಯಿ.

61
firstsuddi

ಬೆಂಗಳೂರು : ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಉದ್ಘಾಟನೆ ಮಾಡಿ ಬಳಿಕ ಮಾತನಾಡಿದರು.

ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ. ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ ಎಂದರು.

ಮಾನವನ ಹೊಂದಾಣಿಕೆಯ ಗುಣ ಅತ್ಯಂತ ಶ್ರೇಷ್ಠವಾದುದು. ಪ್ರತಿಕೂಲ ವಾತಾವರಣದಲ್ಲಿಯೂ ಬದುಕಿ, ಸೈನಿಕರು ಹೋರಾಡುತ್ತಾರೆ. ದೇಶವನ್ನು ವಿಜಯ ಪಥದತ್ತ ನಡೆಸಿ, ಪ್ರಾಣತ್ಯಾಗ ಮಾಡಿದ ಹಾಗೂ ಗಾಯಗೊಂಡ ಎಲ್ಲಾ ಯೋಧರಿಗೂ ಮನದಾಳದ ನಮನ ಸಲ್ಲಿಸುವುದಾಗಿ ತಿಳಿಸಿದರು.

ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ಬೇಡುವ ರಕ್ಷಣಾ ಪಡೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು. ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲ. ಆದರೂ ಸಾಹಸವನ್ನು ಮಾಡುತ್ತಿರುತ್ತಾರೆ. ಕೆಲವು ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದು ಹೊಗಳಿದರು.