ಸೋನಿಯಾ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ – ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ…

58
firstsuddi

ನವದೆಹಲಿ/ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಜಾರಿ ನಿರ್ದೇಶನಾಲಯ(ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನೊಂದೆಡೆ ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಇಡಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ, ಸೋನಿಯಾ ಗಾಂಧಿಗೆ ಬೆಂಬಲ ಸೂಚಿಸಿದ್ದಾರೆ. ಇಡಿ ಕಚೇರಿ ಮುಂದೆ ಪ್ರತಿಭಟನೆ ನಿಯಂತ್ರಣ ಮಾಡಲು ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗಿಸಲಾಗಿದೆ.

ಇತ್ತ ರಾಜ್ಯದಲ್ಲೂ ಸಹ ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಪ್ರಾರಂಭವಾಗಿದ್ದು, ಈ ಹಿನ್ನೆಲೆ ಫ್ರೀಡಂ ಪಾರ್ಕ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯ ಹಿನ್ನೆಲೆ ಅಲ್ಲಿನ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ.