ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ.
ವೈದ್ಯರು ನೀಡಿದ ಮಾಹಿತಿ ಪ್ರಕಾರ, ನಿನ್ನೆ ಜ್ವರದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದಾರೆ.
ಈ ಹಿಂದೆ ಸೋನಿಯಾ ಗಾಂಧಿ ಅವರಿಗೆ ಶ್ವಾಸಕೋಶದಲ್ಲಿ ವೈರಲ್ ಸೋಂಕು ತಗುಲಿ ಇದೇ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.










