ಚೆನ್ನೈ: ಸೌಂದರ್ಯ ಸ್ಪರ್ಧೆಯಲ್ಲಿ ರ‍್ಯಾಂಪ್ ವಾಕ್ ಮಾಡಿದ ಹಿನ್ನೆಲೆ ವಿಶೇಷ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ.
ಕಳೆದ ಭಾನುವಾರ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಇದರಲ್ಲಿ ನಟಿ ಯಶಿಕಾ ಆನಂದ್ ವಿಶೇಷ ಅಥಿತಿಯಾಗಿ ಭಾಗವಹಿಸಿ, ಸ್ಪರ್ಧೆಯನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಿದ್ದರ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜವಗರ್ ಅವರು ಪ್ರಸ್ತುತ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸುಬ್ರಮಣ್ಯನ್ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶ್ರೀನಿವಾಸನ್ ಎಂಬ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.










