ಚಿಕ್ಕಮಗಳೂರು: ಸ್ಕೂಟಿ ಹಾಗೂ ಬೊಲೆರೋ ನಡುವೆ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಗ್ರಾಮದಲ್ಲಿ ನಡೆದಿದೆ.
ಸಿದ್ದಾಪುರ ಗ್ರಾಮದ ಅರ್ಜುನ್(35) ಮತ್ತು ಶ್ವೇತಾ(33) ಮೃತ ದಂಪತಿ. ವೇಗವಾಗಿ ಬಂದ ಬೊಲೆರೋ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










