ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಶಾಸಕ ವಿಶ್ವೇಶ್ವರ ಕಾಗೇರಿ…

250
firstsuddi

ಬೆಂಗಳೂರು : ಕೆ.ಆರ್. ರಮೇಶ್ ಕುಮಾರ್ ಅವರು ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ತೆರವಾಗಿದ್ದ ಸ್ಪೀಕರ್ ಸ್ಥಾನಕ್ಕೆ ಶಿರಸಿ ಶಾಸಕ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ನಾಮಪತ್ರ ಸಲ್ಲಿಸಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶಾಸಕ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಮಾಧುಸ್ವಾಮಿ, ಸಿ.ಟಿ. ರವಿ ಅವರು ಸೇರಿದಂತೆ ಇತರ ನಾಯಕರು ಉಪಸ್ಥಿತರಿದ್ದರು.