ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನ…

67
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಕೆ.ವಿ.ರಾಜು ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಖ್ಯಾತ ನಿರ್ದೇಶಕ ಕೆವಿ ಜಯರಾಮ್ ಅವರ ಸಹೋದರರಾಗಿದ್ದ ಕೆವಿ ರಾಜು, 1982 ರಲ್ಲಿ ‘ಬಾಡದ ಹೂ’ ಚಿತ್ರದಲ್ಲಿ ತಮ್ಮ ಸಹೋದರನಿಗೆ ಸಹಾಯಕ ನಿರ್ದೇಶಕರಾಗುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಕೆಲವೇ ವರ್ಷಗಳಲ್ಲಿ ಚಿತ್ರರಂಗದ ಹಿಟ್ ನಿರ್ದೇಶಕರಾಗಿ ಅವರು ಜನಮೆಚ್ಚುಗೆ ಪಡೆದರು. ಸಂಗ್ರಾಮ (1987), ಬಂಧ ಮುಕ್ತ (1987), ಯುದ್ಧಕಾಂಡ (1989), ಬೆಳ್ಳಿ ಮೋಡಗಳು, ಬೆಳ್ಳಿ ಕಾಲುಂಗುರ, ಮುಂತಾದ ಚಿತ್ರಗಳ ಮೂಲಕ ಅವರು ಬ್ಲಾಕ್ ಬಸ್ಟರ್ ನಿರ್ದೇಶಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸ್ಯಾಂಡಲ್ವುಡ್ ಮಾತ್ರವಲ್ಲದೇ ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ.