ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ-ನಟಿಯರ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ…

191
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ನಂಟು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಇಂದು 5 ಮಂದಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯಿತ್ತು. ಇವರಲ್ಲಿ ಕೆಲವರು ಜೈಲಿನಲ್ಲಿದ್ದರೆ, ಮತ್ತೆ ಕೆಲವರು ಸಿಸಿಬಿ ಕಸ್ಟಡಿಯಲ್ಲಿ ಇದ್ದಾರೆ. ಅಲ್ಲದೇ ಈ ಐವರು ಸಲ್ಲಿಸಿರುವ ಜಾಮೀನು ಅರ್ಜಿ ಒಂದಕ್ಕೊಂದು ಹೊಂದಾಣಿಕೆ ಇರುವುದರಿಂದ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಪರ ವಕೀಲರು ಕಾಲಾವಕಾಶ ಕೇಳಿದ್ದರಿಂದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ.