ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ : ನಟಿ ಸಂಜನಾ ಗಲ್ರಾನಿ ಸಿಸಿಬಿ ವಶಕ್ಕೆ…

200
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರ ಬಂಧನದ ಬೆನ್ನಲ್ಲೇ ಈಗಾ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಅವರ ಆಪ್ತ ರಾಹುಲ್ ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದರು. ರಾಹುಲ್ ಅವರ ಹೇಳಿಕೆಯನ್ನು ಆಧರಿಸಿ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸತತ 4 ಗಂಟೆಗಳ ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ನಟಿಗೆ ಸೇರಿದ ಕೆಲವು ದಾಖಲಾತಿಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇದೀಗ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.