ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ-ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟಿ ರಾಗಿಣಿ…

194
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರು ಎಷ್ಟೇ ಪ್ರಯತ್ನಿಸಿದರೂ ಜಾಮೀನು ಸಿಗದ ಹಿನ್ನೆಲೆ, ಈಗಾ ನಟಿ ರಾಗಿಣಿ ದ್ವಿವೇದಿ ಅವರು ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಕಳೆದ 3 ತಿಂಗಳಿನಿಂದ ಸೆರೆವಾಸ ಅನುಭವಿಸುತ್ತಿರುವ ನಟಿ ರಾಗಿಣಿ ಅವರಿಗೆ ಹೈಕೋರ್ಟ್ ನವೆಂಬರ್ 3ರಂದು ಜಾಮೀನು ನಿರಾಕರಿಸಿತ್ತು. 3 ತಿಂಗಳಿನಿಂದ ಎಷ್ಟೇ ಪ್ರಯತ್ನಿಸಿದರೂ ಜಾಮೀನು ಸಿಗದ ಹಿನ್ನೆಲೆ, ನಟಿ ರಾಗಿಣಿ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ಡಿಸೆಂಬರ್ 4ರಂದು ವಿಚಾರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.