ಸ್ಯಾಂಡಲ್‍ವುಡ್ ನಟ ಧ್ರುವಾ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್…!

225
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನಟ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಧ್ರುವ ಸರ್ಜಾ ಅವರೇ ತಮ್ಮ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದು, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡುಬಂದ ಹಿನ್ನೆಲೆ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಬರುತ್ತೇವೆ. ಹಾಗೂ ನಮ್ಮೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.