ಬೆಂಗಳೂರು : ಸ್ಯಾಂಡಲ್ವುಡ್ನ ಹಾಸ್ಯ ನಟ ಮೋಹನ್ ಜುನೇಜ ಅವರು ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಜುನೇಜ ಅವರು ಹಾಸ್ಯ ಪಾತ್ರಗಳ ಮೂಲಕ ಫೇಮಸ್ ಆಗಿದ್ದರು. ಕೆಜಿಎಫ್ ಚಾಪ್ಟರ್ 1 ಮತ್ತು ಕೆಜಿಎಫ್ ಚಾಪ್ಟರ್-2 ಸಿನಿಮಾದಲ್ಲೂ ಅಭಿನಯಿಸಿದ್ದರು.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮೋಹನ್ ಜುನೇಜ ಅವರನ್ನು ಚಿಕ್ಕಬಾಣಾವರದ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಜುನೇಜ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.










