ಸ್ಲಂ ನಿವಾಸಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡ ನಟಿ ಪ್ರಣಿತಾ…

648
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ ಅವರು ಇಂದು ತಮ್ಮ 28ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪ್ರಣಿತಾ ಅವರು ಕಳೆದ ವರ್ಷ ಹುಟ್ಟು ಹಬ್ಬದಂದು ಸರ್ಕಾರಿ ಶಾಲೆಯನ್ನು ದತ್ತು ಪಡೆದು 5ಲಕ್ಷ ರೂ ಹಣವನ್ನು ನೀಡುವ ಮೂಲಕ ಆಚರಿಸಿಕೊಂಡಿದ್ದರು. ಅದರಂತೆ ಈ ಬಾರಿಯೂ ಕೂಡಾ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಅಲ್ಲದೇ ಪ್ರಣಿತಾ ಅವರು ಸಮಾಜಮುಖಿ ಕಾರ್ಯವನ್ನು ಮಾಡಲು ಪ್ರಣಿತಾ ಫೌಂಡೇಶನ್ ಎಂಬ ಸಂಸ್ಥೆಯನ್ನು ಆರಂಭಿಸಿದ್ದಾರೆ. ಕನ್ನಡದ ಪೊರ್ಕಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಅವರು, ಜರಾಸಂಧ, ಬ್ರಹ್ಮ ಸೇರಿದಂತೆ ಹಲವಾರು ಚಿತ್ರದಲ್ಲಿ ನಟಿಸಿದ್ದಾರೆ.