ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ; ನಾಲ್ವರು ಸ್ಥಳದಲ್ಲೇ ಸಾವು…

132
firstsuddi

ಬಳ್ಳಾರಿ : ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜನತಾ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ, ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಬಳಿ ನಡೆದಿದೆ.

ಜಿಲ್ಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದ ಭೀಮರಾವ್ ಬೆಳ್ಳೂರು (52), ಅವರ ಮಗ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ಬಸವರಾಜ್ (30), ಟೆಕ್ಕಿ ಸುನಿಲ್ ಪಾಟೀಲ (30) ಹಾಗೂ ಚಾಲಕ ರೇವಣಸಿದ್ದ ಕೊರಡಂಪಳ್ಳಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಿನ ಜಾವ 1.45 ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರು ಚಿಂಚೋಳಿ ತಾಲ್ಲೂಕಿನ ಚಿಮ್ಮಾ ಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದವರೆಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.