ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ 50 ಲಕ್ಷ ಹಣ ಕಳೆದುಕೊಂಡ ಪ್ರತಿಷ್ಠಿತ ಚಿನ್ನದ ವ್ಯಾಪಾರಿ.

79
firstsuddi

ಮಂಡ್ಯ: ಪ್ರತಿಷ್ಠಿತ ಚಿನ್ನದ ವ್ಯಾಪಾರಿಯೊಬ್ಬರು ಹನಿಟ್ರ್ಯಾಪ್ ಸುಳಿಗೆ ಸಿಲುಕಿ 50 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದು, ಆರು ತಿಂಗಳ ಬಳಿಕ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ಹನಿಟ್ರ್ಯಾಪ್ ಗೆ ಸಿಲುಕಿದವರು. ಫೆಬ್ರವರಿ 26 ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಜಗನ್ನಾಥ್ ಶೆಟ್ಟಿ ಕಾಯುತ್ತಿದ್ದರು. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದಿದ್ದಾರೆ. ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್ ಗೆ ಕರೆದೊಯ್ದಿದ್ದಾರೆ. ರೂಮ್ ನಲ್ಲಿ ಯುವತಿ ಜೊತೆ ವಿಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ 50 ಲಕ್ಷ ಕೊಟ್ಟು ಅಲ್ಲಿಂದ ಜಗನ್ನಾಥ್ ತೆರಳಿದ್ದರು.

ಆದರೆ ಹಣಕ್ಕಾಗಿ ಮತ್ತೆ ಈ ಗ್ಯಾಂಗ್ ಬೇಡಿಕೆ ಇಟ್ಟಿದ್ದಲ್ಲದೇ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದೆ. ಇದರಿಂದ ಬೇಸತ್ತ ಜಗನ್ನಾಥ್ ಶೆಟ್ಟಿ ಅವರು 6 ತಿಂಗಳ ಬಳಿಕ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇರೆಗೆ ಪಶ್ಚಿಮ ಠಾಣೆ ಪೊಲೀಸರು ಸಮಾಜ ಸೇವೆ, ಮಾನವ ಹಕ್ಕು ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸಲ್ಮಾಬಾನು ಎಂಬಾಕೆಯನ್ನು ಬಂಧಿಸಿದ್ದಾರೆ.