ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವಂತಹ ಘಟನೆ ನಗರದ ಸಿಲ್ವರ್ ಟೌನ್‌ನಲ್ಲಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ.
ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ಈ ವೇಳೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇನ್ನೂ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










