ವಿಜಯಪುರ/ಹಾವೇರಿ : ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ಅಂತಿಮ ತೆರೆ ಬೀಳಲಿದೆ.
ಉಭಯ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯುತ್ತಿರುವ ಕಾರಣ ಇಂದು ಸಂಜೆ 7ರಿಂದ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಮೆರವಣಿಗೆ ಹಾಗೂ ಸಭೆ-ಸಮಾರಂಭಗಳನ್ನು ನಿಷೇಧಿಸಲಾಗಿದೆ. ಇಂದು ಕೊನೆಯ ದಿನವಾಗಿರುವ ಕಾರಣ ಆಡಳಿತ ಪಕ್ಷದ ಸಚಿವರು ಸೇರಿದಂತೆ ವಿರೋಧ ಪಕ್ಷದವರು ಕೊನೆಯ ಕಸರತ್ತು ನಡೆಸಲಿದ್ದಾರೆ.
ಹಾನಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ್ ಸಜ್ಜನ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀನಿವಾಸ ಮಾನೆ ಹಾಗೂ ಜೆಡಿಎಸ್ನಿಂದ ನಿಯಾಜ್ ಶೇಖ್ ಕಣದಲ್ಲಿದ್ದಾರೆ. ಇನ್ನೂ ಸಿಂದಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿ, ಜೆಡಿಎಸ್ನಿಂದ ನಾಜಿಯಾ ಶಕೀಲಾ ಅಂಗಡಿ ಕಣದಲ್ಲಿದ್ದಾರೆ.










