ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಮೃತ ಚಾಲಕನನ್ನು ಸದಾನಂದ (50) ಎಂದು ಗುರುತಿಸಲಾಗಿದೆ. ಅಲ್ಲದೇ ಓರ್ವ ಪ್ರಯಾಣಿಕ ಸಹ ಮೃತಪಟ್ಟಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಖಾಸಗಿ ಬಸ್ ಬೆಂಗಳೂರಿನಿಂದ ಮೀರಜ್‍ಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ, ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










