ಹಾವೇರಿ : ಇನ್ನೋವಾ ಕಾರೊಂದು ಪಲ್ಟಿಯಾಗಿ ಹೊತ್ತಿ ಉರಿದಿರುವ ಘಟನೆ ತಾಲ್ಲೂಕಿನ ನಾಗನೂರು ಬ್ರಿಡ್ಜ್ ಬಳಿ ನಡೆದಿದೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ತಮಿಳುನಾಡಿನಿಂದ ಗೋವಾದತ್ತ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










