ಹಾಸನ : ಕಾಂಗ್ರೆಸ್ ಕಚೇರಿಯಲ್ಲಿ ಬಿತ್ತಿಪತ್ರದ ಮುಂದೆ ತಿಥಿ ವಡೆ ಹಾಗೂ ಹೂವಿನ ಹಾರವನ್ನು ಹಾಕಿ ಅತೃಪ್ತ ಶಾಸಕರ ವಿರುದ್ಧ ಆಕ್ರೋಶ…

280
firstsuddi

ಹಾಸನ : ಕಾಂಗ್ರೆಸ್ ಶಾಸಕರು ಮೈತ್ರಿ ಸರ್ಕಾರ ಅಸ್ಥಿರಗೊಳಿಸುವಲ್ಲಿ 14 ಶಾಸಕರು ಪ್ರಮುಖ ಪಾತ್ರ ವಹಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು 14ಜನ ಅತೃಪ್ತ ಶಾಸಕರ ಶ್ರದ್ಧಾಂಜಲಿಯನ್ನು ಹಾಸನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸುವ ಮೂಲಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಹೆಸರನ್ನು ಬರೆದಿದ್ದ ಬಿತ್ತಿಪತ್ರದ ಮುಂದೆ ತಿಥಿ ವಡೆ ಹಾಗೂ ಹೂವಿನ ಹಾರಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದಿಂದ ಗೆದ್ದು ಪಕ್ಷಕ್ಕೆ ದ್ರೋಹ ಮಾಡಿದವರು ನಮ್ಮ ಪಾಲಿಗೆ ಸತ್ತಿದ್ದಾರೆ. ಹೀಗಾಗಿ ಅನರ್ಹ ಶಾಸಕರ ತಿಥಿಯನ್ನು ಮಾಡಿದ್ದೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.