ಹಾಸನ : ಯುವಕನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಡಾವಣೆಯಲ್ಲಿ ನಡೆದಿದೆ. ತಾಲ್ಲೂಕಿನ ಚಿಕ್ಕಗೇಣಗೆರೆ ನಿವಾಸಿ ರಮೇಶ್(33) ಮೃತ ದುರ್ದೈವಿ ಎನ್ನಲಾಗಿದ್ದು, ರಮೇಶ್ ಅವರು ಹಾಸನದ ತಂಗಿ ಮನೆಗೆ ಹಬ್ಬಕ್ಕೆಂದು ತೆರಳಿದ್ದು, ರಾತ್ರಿ 10 ಗಂಟೆಗೆ ವೇಳೆ ಊಟ ಮುಗಿಸಿ ಸುತ್ತಾಡಲು ಹೊರಟಿದ್ದವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹತ್ಯೆ ಮಾಡಿ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಮನಿವಾಸ್ ಸೆಪಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ.










