ಹಾಸನ : ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಬಂದ್…

130
firstsuddi

ಹಾಸನ : ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಕೊರೊನಾ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯನವರು ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಮಾಡಲು ಆದೇಶ ಹೊರಡಿಸಿದ್ದಾರೆ.

ಇಂದಿನಿಂದಲೇ ಟಫ್ ರೂಲ್ಸ್ ಜಾರಿ ಮಾಡಲಾಗಿದ್ದು, ಈ ಹಿನ್ನಲೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ನೀಡಲಾಗಿದ್ದು ಉಳಿದ ನಾಲ್ಕು ದಿನ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ. ಆದರೆ ಹಾಲಿನ ಡೈರಿ, ಆಸ್ಪತ್ರೆಗಳು, ನರ್ಸಿಂಗ್ ಹೋಂ, ಮೆಡಿಕಲ್ ಶಾಪ್ ಗಳು ತೆರೆದಿರುತ್ತವೆ. ಬಾರ್ ಗಳಿಗೂ ಅದೇ ದಿನಗಳು ಮಾತ್ರ ನಿಗದಿತ ಸಮಯ ತೆರೆಯಬೇಕು. ಆನಂತರ ಸಂಪೂರ್ಣ ಲಾಕ್ ಡೌನ್ ಮಾಡಲು ಸೂಚಿಸಲಾಗಿದೆ.