ಹಾಸನ : ನಗರದ ಪ್ರತಿಷ್ಠಿತ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.
ನಗರದ ಹಳೇಬೀಡು ರಸ್ತೆಯ ಮಲೆನಾಡು ತಾಂತ್ರಿಕ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಪ್ರತಿನಿಧಿಯ ಚುನಾವಣೆ ನಡೆದಿತ್ತು. ನಿನ್ನೆ ಸಂಜೆ ವಿದ್ಯಾರ್ಥಿ ಪ್ರತಿನಿಧಿ ಚುನಾವಣಾ ಫಲಿತಾಂಶದ ಬಳಿಕ 2 ಗುಂಪುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಸಾರ್ವಜನಿಕರು ಆತಂಕಕ್ಕೊಳಗಾಗಿದ್ದರು.
ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ವರ್ತನೆ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ಹೆಸರಿನಲ್ಲಿ ಪುಂಡಾಟ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಘಟನೆ ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.










