ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಇಂದು ಶ್ರಾವಣ ಮಾಸದ ಕೊನೆ ಶನಿವಾರ ಹಿನ್ನೆಲೆ, ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಹೆಚ್.ಡಿ. ದೇವೇಗೌಡ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಮೊಮ್ಮಗ ಸೂರಜ್ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ರಂಗನಾಥ ಸ್ವಾಮಿಗೆ ಅಭಿಷೇಕ ಪೂಜೆಯನ್ನು ನೆರವೇರಿಸಿದರು.










