ಹಾಸನ : ರಾಜ್ಯದಲ್ಲಿ ಕೊರೊನಾ ಹಾವಳಿ ಮತ್ತೆ ಉಲ್ಬಣಗೊಳ್ಳುತ್ತಿದೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯ 13 ಮಂದಿ ಹೈಸ್ಕೂಲ್ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ.
ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಶಾಲೆಯ ಇತರ ಮಕ್ಕಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸಲು ಶಾಲೆಗೆ ಸೂಚನೆ ನೀಡಲಾಗಿದೆ.
ಈ ಮೂಲಕ ಕೋವಿಡ್-19 ಅಲೆಯ ಮೂರನೇ ಹಂತದಲ್ಲಿ ಹೆಚ್ಚು ಹೆಚ್ಚಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬರುತ್ತಿರುವುದು ಮತ್ತೆ ಸಾಬೀತಾಗಿದೆ.










