ಹಾಸನ : ಜಿಲ್ಲೆಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ಶಾಲೆಗಳು ಆರಂಭವಾಗಿದ್ದವು. ಆದರೆ ನಿನ್ನೆ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದ ಮಕ್ಕಳು ಶಾಲೆಗಳಿಗೆ ಬರಲು ಸಮಸ್ಯೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ದಿನದ ನಷ್ಟವನ್ನು ಬೇರೆ ರಜಾ ದಿನಗಳಲ್ಲಿ ತರಗತಿ ನಡೆಸುವ ಮೂಲಕ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.










