ಹಾಸನಾಂಬೆ ದರ್ಶನಕ್ಕೆ ಇಂದು ತೆರೆ – ಮುಂದಿನ ವರ್ಷ ದೇವಿಯ ದರ್ಶನ ಭಾಗ್ಯ…

69
firstsuddi

ಹಾಸನ : ಹಾಸನಾಂಬೆಯ ದರ್ಶನಕ್ಕೆ ಇಂದು ತೆರೆ ಬಿದ್ದಿದೆ. ಅಕ್ಟೋಬರ್ 28 ರಂದು ದೇವಾಲಯ ತೆರೆಯಲಾಗಿತ್ತು. ಕಳೆದ 9 ದಿನಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ತಾಯಿ ಹಾಸನಾಂಬೆಯ ದರ್ಶನ ಪಡೆದಿದ್ದರು. 10ನೇ ದಿನವಾದ ಇಂದು ಗರ್ಭಗುಡಿ ಬಾಗಿಲನ್ನು ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಮುಚ್ಚಲಾಗಿದೆ.

ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆ ಸಲ್ಲಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಯಿತು. ಇನ್ನು ಮುಂದಿನ ವರ್ಷ ಮತ್ತೆ ದೇವಿಯ ದರ್ಶನ ಭಾಗ್ಯ ಸಿಗಲಿದೆ.