ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು…

43
firstsuddi

ದೇವನಹಳ್ಳಿ: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಮೃತ ವಿದ್ಯಾರ್ಥಿ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

ಇನ್ನೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.