ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳ ರೀತಿ ಬದುಕಬೇಕು : ಬಿ.ಎಸ್.ಯಡಿಯೂರಪ್ಪ.

70
firstsuddi

ಬೆಂಗಳೂರು : ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳ ರೀತಿ ಬದುಕಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಹಿಂದೂ-ಮುಸ್ಲಿಮರು ಸಹೋದರರಂತೆ ಬದುಕಬೇಕು. ಆದರೆ ಯಾರೋ ಕಿಡಿಗೇಡಿಗಳು ಇದಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ. ಇಂತಹ ಕೃತ್ಯದಲ್ಲಿ ತೊಡಗಿದವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. ನಾನು ಕೂಡ ಸಮುದಾಯದವರಿಗೆ ಕಿವಿಮಾತು ಹೇಳುತ್ತೇನೆ. ಇದನ್ನು ನಿಲ್ಲಿಸಿ, ನಿಮ್ಮ ನಿಮ್ಮ ಕೆಲಸ ಮಾಡಿಕೊಂಡಿರಿ. ಯಾರೂ ರಾಜ್ಯದ ಸಾಮರಸ್ಯವನ್ನು ಕದಡಬೇಡಿ ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ನವರಿಗೆ ಏನೂ ಚಟುವಟಿಕೆ ಇಲ್ಲದ ಕಾರಣ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಪ್ರತಿಭಟನೆ ಬಗ್ಗೆ ಹೆಚ್ಚು ಮಾತಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ರಾಜ್ಯದ ಅಭಿವೃದ್ಧಿ ಮಾಡಬೇಕು. ಸಣ್ಣಪುಟ್ಟ ವಿಷಯಗಳನ್ನು ಇರಿಸಿಕೊಂಡು ಗೊಂದಲ ಸೃಷ್ಟಿಸುವ ಕೆಲಸವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಡಬಾರದು ಎಂದು ಸಲಹೆ ನೀಡಿದರು.

ಪಕ್ಷವನ್ನು ಬಲಪಡಿಸುವ ದೃಷ್ಟಿಯಿಂದ ಹೈಕಮಾಂಡ್ ಜೊತೆ ವಿಶೇಷವಾಗಿ ಸಮಾಲೋಚನೆ ಮಾಡಿ, ಮುಂದಿನ ಚುನಾವಣೆಗೆ ಸಿದ್ಧತೆ ಮಾಡುವ ದೃಷ್ಟಿಯಿಂದ ಪ್ರವಾಸ ಮಾಡುತ್ತಿದ್ದೇವೆ. ಮುಂದೆ ನಿರಂತರವಾಗಿ ಪ್ರವಾಸ ನಡೆಯಲಿದೆ ಎಂದರು.