ಮಂಗಳೂರು: ಚಲನಚಿತ್ರ ನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ಸಂಭವಿಸಿದೆ. ಹಿಂದೂ ಸಂಘಟನೆಗಳಲ್ಲಿ ಸುರೇಂದ್ರ ಬಂಟ್ವಾಳ್ ಅವರು ಸಕ್ರಿಯವಾಗಿ ತೊಡಗಿಕೊಂಡಿದ್ದರು. ನಟ ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು ಎನ್ನಲಾಗಿದ್ದು, ಈ ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ಅವರನ್ನು ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಅವರು ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು.










