ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ : ಕೇಂದ್ರ ಸರ್ಕಾರ ಸ್ಪಷ್ಟನೆ…

95
firstsuddi

ನವದೆಹಲಿ : ಹಿಂದೂಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಿಮೆ ಪ್ರಮಾಣದಲ್ಲಿರುವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಕಾಶ್ಮೀರ, ಲಡಾಖ್, ಮಿಜೋರಾಂ, ಲಕ್ಷದ್ವೀಪ, ಮೇಘಾಲಯ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಪಂಜಾಬ್ ನಲ್ಲಿ ಅಲ್ಪಸಂಖ್ಯಾತರಾಗಿರುವ ಜುದಾಯಿಸಂ, ಬಹಾಯಿಸಂ ಸಮುದಾಯವನ್ನು ಹಿಂದೂ ಧರ್ಮದ ಅನುಯಾಯಿಗಳು ಎಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಮೂಲಕ ಹೀಗೆ ಉತ್ತರಿಸಿದೆ.

1992 ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಅಡಿ ಭಾಷಾವಾರು ಅಥವಾ ಧಾರ್ಮಿಕ ಸಮುದಾಯಗಳನ್ನು ‘ಅಲ್ಪಸಂಖ್ಯಾತರು’ ಎಂದು ಘೋಷಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ, ರಾಜ್ಯ ಸರ್ಕಾರಗಳು ಈ ರಾಜ್ಯದೊಳಗೆ ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ‘ಅಲ್ಪಸಂಖ್ಯಾತ ಸಮುದಾಯ’ ಎಂದು ಘೋಷಿಸಬಹುದು ಎಂದು ತಿಳಿಸಿದೆ.