ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ – ಹೈಕೋರ್ಟ್ ಮಹತ್ವದ ತೀರ್ಪು…

122
firstsuddi

ಬೆಂಗಳೂರು : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಸೇರಿದಂತೆ ಮೂವರು ನ್ಯಾಯಾಧೀಶರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದೆ.

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶ ಎತ್ತಿಹಿಡಿದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.