ಶಿವಮೊಗ್ಗ/ಉಡುಪಿ : ಹೈಕೋರ್ಟ್ ನಲ್ಲಿ ಇಂದು ಹಿಜಾಬ್ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶಿಸಿವೆ.
ಹಿಜಾಬ್ ತೀರ್ಪು ಪ್ರಕಟ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೂ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.
ಇಂದು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿರುವ ಜಿಲ್ಲಾಡಳಿತ, ಶಾಲಾ – ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಶಿವಮೊಗ್ಗದಲ್ಲೂ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹಾಗೂ ಶಾಲಾ ಕಾಲೇಜು ಆವರಣದಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.










