ಕುಂದಾಪುರ : ಹಿಜಾಬ್ ಪ್ರಕರಣದ ವಿಚಾರದಲ್ಲಿ ನಗರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕೋಲಾರ ಕೆಜಿಎಫ್ ರಾಬರ್ಟ್ಸನ್ ಪೇಟೆ ನಿವಾಸಿ ಮೊಹಮ್ಮದ್ ಶಬೀರ್ ಬಂಧಿತ ಆರೋಪಿ. ಆರೋಪಿಯು ನಗರದ ಆರ್ ಎನ್ ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಿಗೆ ಇಂಟರ್ ನೆಟ್ ಕರೆ ಮಾಡಿ ಹಿಜಾಬ್ ಹಾಕಲು ಅವಕಾಶ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದ್ದು ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕರೆಯ ಜಾಡು ಹಿಡಿದು ಹೊರಟ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










