ಹಿಜಾಬ್ ವಿವಾದ : ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು…

57
firstsuddi

ಮಂಗಳೂರು : ಹಿಜಾಬ್ ಸಮರ ಮತ್ತೆ ಮುಂದುವರಿದಿದ್ದು, ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾಲೇಜಿನಿಂದ ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಶೇ.16 ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಟಿಸಿಯನ್ನು ಹಿಂಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಟಿಸಿ ಪಡೆಯಬಹುದು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ಟಿಸಿಯನ್ನು ಹಿಂಪಡೆದಿದ್ದಾರೆ. ಅದರಲ್ಲಿ ಸರ್ಕಾರಿ ಕಾಲೇಜಿನ 34%, ಅನುದಾನಿತ ಕಾಲೇಜಿನ 13% ವಿದ್ಯಾರ್ಥಿನಿಯರಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಮಾತನಾಡಿ, ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್. ಸಂವಿಧಾನ ನೀಡಿರುವ ಹಕ್ಕಿನ ಪ್ರಕಾರ ಶಿಕ್ಷಣ ಪಡೆಯಲು ನಾಗೇಶ್ ಬಿಡಲಿಲ್ಲ. ತುಂಡು ಬಟ್ಟೆಯನ್ನೇ ದೊಡ್ಡ ವಿವಾದವನ್ನಾಗಿ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೇ ನಷ್ಟವಾಗಲಿದೆ. ಹಲವು ಸರ್ಕಾರಿ ಕಾಲೇಜುಗಳು ಮುಚ್ಚಲಿದೆ. ಇಡೀ ರಾಜ್ಯಾದ್ಯಂತ 30% ಅಧಿಕ ವಿದ್ಯಾರ್ಥಿನಿಯರು ಕಾಲೇಜು ಬಿಟ್ಟಿದ್ದಾರೆ. ರಾಜ್ಯಕ್ಕೆ ಇದು ಜಲ್ವಂತ ಸಮಸ್ಯೆಯಾಗಲಿದೆ ಎಂದು ಹೇಳಿದ್ದಾರೆ.