ಹಿಜಾಬ್ ವಿವಾದ ; ಮುಂದಿನ ವಾರ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್.

58
firstsuddi

ನವದೆಹಲಿ : ಹಿಜಾಬ್ ವಿವಾದ ಸಂಬಂಧ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.

ವಕೀಲ ಪ್ರಶಾಂತ್ ಭೂಷಣ್ ಅವರು ಹಿಜಾಬ್ ವಿವಾದದ ಕುರಿತು ಮಾರ್ಚ್ ನಲ್ಲೇ ಅರ್ಜಿ ಸಲ್ಲಿಸಲಾಗಿದ್ದು, ವಿಚಾರಣೆ ವಿಳಂಬವಾಗುತ್ತಿದೆ ಎಂದು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮುಂದಿನ ವಾರ ಸೂಕ್ತ ಪೀಠದಲ್ಲಿ ವಿಚಾರಣೆ ನಡೆಸಲಾಗುವುದು ಎಂದರು.

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಈ ಹಿಂದೆ ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಅಲ್ಲದೇ, ಈ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸೇರಿದಂತೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದ್ದವು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ನಂತರ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು.