ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನಕ್ಕೆ ಮುಂದೂಡಿದ ಹೈಕೋರ್ಟ್.

84
firstsuddi

ಬೆಂಗಳೂರು : ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ಇಂದು ಕೂಡ ವಿಚಾರಣೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದ್ದು, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಹಿಜಾಬ್ ಧರಿಸದಿರುವುದು ಕಡ್ಡಾಯ ಧಾರ್ಮಿಕ ಆಚರಣೆಯಲ್ಲ. ಹೀಗಾಗಿ ಅದು ಮೂಲಭೂತ ಹಕ್ಕಿನ ಉಲ್ಲಂಘನೆಯೂ ಆಗುವುದಿಲ್ಲ ಎಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ವಾದ ಮಂಡಿಸಿದರು.