ಬೆಂಗಳೂರು: ಹಿಟ್ ಆ್ಯಂಡ್ ರನ್ಗೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ.
ಓರ್ವ ಮೃತನನ್ನು ಮಂಗಮ್ಮನಪಾಳ್ಯ ವಾಸಿ ಮಂಜಪ್ಪ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಇವರಿಬ್ಬರು ಬೈಕ್ ಮೇಲೆ ತೆರಳುವಾಗ ಹಿಂಬದಿಯಿಂದ ಬಂದ ಅಪರಿಚಿತ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.










