ಹಿಮಾಚಲ ಪ್ರದೇಶ ಚುನಾವಣೆ – ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್.

55
firstsuddi

ಶಿಮ್ಲಾ : ನವೆಂಬರ್ 12ರಂದು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಇಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, 30 ಯುನಿಟ್ ಉಚಿತ ವಿದ್ಯುತ್ ಪೂರೈಕೆ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ 10 ಕೋಟಿ ಸ್ಟಾರ್ಟ್ ಅಫ್ ಫಂಡ್ ನೀಡುವುದಾಗಿ ಘೋಷಿಸಿದೆ.

ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಧನಿ ರಾಮ್ ಶಾಂಡಿಲ್ ಮಾತನಾಡಿ, ಬಿಜೆಪಿ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು 5 ವರ್ಷಗಳ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ನಮ್ಮದು ಚುನಾವಣಾ ಪ್ರಣಾಳಿಕೆ ಅಲ್ಲ ಆದರೆ ಹಿಮಾಚಲ ಪ್ರದೇಶದ ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಸಿದ್ಧಪಡಿಸಲಾದ ದಾಖಲೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಾಜೀವ್ ಶುಕ್ಲಾ, ಮಾಜಿ ಪಿಸಿಸಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖು ಮತ್ತು ಐಸಿಸಿ ಕಾರ್ಯದರ್ಶಿ ತೇಜಿಂದರ್ ಪಾಲ್ ಮತ್ತಿತರರು ಉಪಸ್ಥಿತರಿದ್ದರು.