ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ…

48
firstsuddi

ನವದೆಹಲಿ : ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ನವೆಂಬರ್ 12 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಿದರು. ಹಿಮಾಚಲ ಪ್ರದೇಶದ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಅಂತ್ಯಗೊಳ್ಳಲಿದೆ. ಹಿಮಾಚಲ ಪ್ರದೇಶದಲ್ಲಿ 68 ವಿಧಾನಸಭಾ ಸ್ಥಾನಗಳಿಗೆ 55 ಲಕ್ಷಕ್ಕೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಅಕ್ಟೋಬರ್ 25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಅ.29ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ.